Breaking News

ಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ

Spread the love

ಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆಗೈದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆ ಆವರಣದಲ್ಲಿ ಭೀಕರ ಕೊಲೆ ನಡೆದಿದ್ದು, ದುಷ್ಕರ್ಮಿಗಳು ತಡರಾತ್ರಿ ತಲೆ ಮೇಲೆ ಕಲ್ಲು ಹಾಕಿ ಶರಣಪ್ಪ ಕಕ್ಕಳಮೇಲಿ (45) ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ. ಕೊಲೆಯಾದ ಶರಣಪ್ಪ ಸಿಂದಗಿ ತಾಲ್ಲೂಕಿನ. ಮಲಘಾಣ ಗ್ರಾಮದ ನಿವಾಸಿಯಾಗಿದ್ದಾನೆ.

ಕುಡಿದ ನಶೆಯಲ್ಲಿ ಹಂತಕರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸಿಂದಗಿ ಪಿಎಸ್‌ಐ ಆರೀಪ್ ಮುಶಾಪುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಡರಾತ್ರಿ ದುಷ್ಕರ್ಮಿಗಳು ಶಾಲೆ ಆವರಣದಲ್ಲಿ ಕುಡಿದು ಬಳಿಕ ಕೊಲೆ ಮಾಡಿ ಹೋಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು ದುಷ್ಕರ್ಮಿಗಳಿಗಾಗಿ ಬಲೆ ಬೀಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ