Breaking News

ಪೊಲೀಸರ ಮೇಲೆ ಹಲ್ಲೆ ಮಾಡಿದ್ದವನ ಕಾಲಿಗೆ ಗುಂಡೇಟು

Spread the love

ಗದಗ, ನವೆಂಬರ್​ 23: ಪೊಲೀಸರ್ ಮೇಲೆ ಹಲ್ಲೆ ‌ಮಾಡಿ ಪರಾರಿ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡಿನ (Shot) ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ. 

ಆರೋಪಿ ಬಗರ್ ಅಲಿ ಇರಾನಿ ಮೇಲೆ ಫೈರಿಂಗ್ ಮಾಡಲಾಗಿದೆ. ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸ್​ನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಬಂಧಿಸಲಾಗಿತ್ತು.

ಹೊಳೆಆಲೂರಗೆ ಪಂಚನಾಮೆ ಹೋಗಿ ವಾಪಸ ಬರುವಾಗ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆರೋಪಿ ಬಗರ್ ಅಲಿ ಇರಾನಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲು ಯತ್ನಿಸಿದ್ದ. ಬಡಾವಣೆ ಠಾಣೆ ಸಿಬ್ಬಂದಿ ಹನುಮಂತ ಓಲೇಕಾರ, ಅಶೋಕ್ ಗಡದ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಗರ್ ಅಲಿ ಮೊಣಕಾಲಿಗೆ ಸಿಪಿಐ ಧೀರಜ್​ ಶಿಂಧೆ ಗುಂಡು ಹಾರಿಸಿದ್ದಾರೆ. ಸದ್ಯ ರೋಣ ಆಸ್ಪತ್ರೆಯಲ್ಲಿ ಪೊಲೀಸ್​ ಸಿಬ್ಬಂದಿಗೆ ಚಿಕಿತ್ಸೆ ನೀಡಲಾಗಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ