Breaking News

ಉಪ‌ ಚುನಾವಣಾ ಫಲಿತಾಂಶ ವಿಪಕ್ಷಗಳ ಆರೋಪಕ್ಕೆ ಜನರಿಂದಲೇ ಚಾಟಿ ಏಟು:ಹೆಬ್ಬಾಳಕರ್

Spread the love

ಜನರ ಆಶೀರ್ವಾದದಿಂದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ವಿರೋಧಿಗಳ ಟೀಕೆಗೆ ಜನ ಉತ್ತರ ಕೊಟ್ಟಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಗ್ಯಾರಂಟಿಗಳನ್ನು ನೀಡಿದೆ.
ಮಹಿಳೆಯರು ಕೂಡ ಗ್ಯಾರಂಟಿಗಳ ಪ್ರಯೋಜನ ಪಡೆದುಕೊಂಡಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಅನುಕೂಲ ಆಗಿದೆ.
ಗ್ಯಾರಂಟಿಗಳ ಬಗ್ಗೆ ವಿರೋಧಿಗಳು ಪದೇ ಪದೇ ಟೀಕೆ ಮಾಡುತ್ತಿದ್ದರು. ಈ ಎಲ್ಲಾ ಟೀಕೆಗಳಿಗೂ ಮತದಾರರು ಉತ್ತರ ನೀಡಿದ್ದಾರೆ‌ ಎಂದು ಹೇಳಿದರು.

ಬಿಜೆಪಿಯವರು ಸರ್ಕಾರದ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದರು. ಏನೂ ಇಲ್ಲದಿದ್ದರೂ ಬಿಜೆಪಿಯವರು ಹಗರಣ ಇದೆ ಎಂದು ಆರೋಪ ಮಾಡುತ್ತಿದ್ದರು‌. ಉಪ ಚುನಾವಣೆಯಲ್ಲಿ ಅದಕ್ಕೆಲ್ಲಾ ಶಾಸ್ತಿ‌ಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ