Breaking News

ಕಾಂಗ್ರೆಸ್​​ನಲ್ಲಿ ಮತ್ತೆ ಭುಗಿಲೆದ್ದ ಅನುದಾನ ವಾರ್:

Spread the love

ಕಾಂಗ್ರೆಸ್​ನಲ್ಲಿ ಮತ್ತೆ ಅನುದಾನ ಸಂಬಂಧಿತ ವಾಕ್ಸಮರ​ ಶುರುವಾಗಿದೆ. ‘ಕೈ’ ಶಾಸಕನ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಹೊಸಪೇಟೆಯಲ್ಲಿ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಮತ್ತು ಶಾಸಕ ಗವಿಯಪ್ಪ ಮಧ್ಯೆ ವಾಕ್ಸಮರ ಜೋರಾಗಿದೆ. ಜೊತೆಗೆ ಬಿಜೆಪಿ ಶಾಸಕರು ಕೂಡ ಸರ್ಕಾರ ತಾರತಮ್ಯ ಮಾಡ್ತಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆಗೂ ಮುನ್ನ ಕೆಲವು ದಿನಗಳ ಹಿಂದೆ ಕಾಂಗ್ರೆಸ್​ನಲ್ಲಿ ಸ್ಫೋಟಗೊಂಡಿದ್ದ ಅನುದಾನ ಅಸಮಾಧಾನದ ಬಾಂಬ್, ಇದೀಗ ಮತ್ತೆ ಸದ್ದು ಮಾಡುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ಅನುದಾನದ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಾಸಕ ಹೆಚ್​ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದಾರೆ.

Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ