ಕಾಂಗ್ರೆಸ್ನಲ್ಲಿ ಮತ್ತೆ ಭುಗಿಲೆದ್ದ ಅನುದಾನ ವಾರ್:
Laxminews 24x7
ನವೆಂಬರ್ 25, 2024
ರಾಜಕೀಯ, ರಾಜ್ಯ
115 Views
ಕಾಂಗ್ರೆಸ್ನಲ್ಲಿ ಮತ್ತೆ ಅನುದಾನ ಸಂಬಂಧಿತ ವಾಕ್ಸಮರ ಶುರುವಾಗಿದೆ. ‘ಕೈ’ ಶಾಸಕನ ವಿರುದ್ಧ ಸ್ವಪಕ್ಷದ ಮುಖಂಡರೇ ವಾಗ್ದಾಳಿ ನಡೆಸಿದ್ದಾರೆ. ಹೊಸಪೇಟೆಯಲ್ಲಿ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಮತ್ತು ಶಾಸಕ ಗವಿಯಪ್ಪ ಮಧ್ಯೆ ವಾಕ್ಸಮರ ಜೋರಾಗಿದೆ. ಜೊತೆಗೆ ಬಿಜೆಪಿ ಶಾಸಕರು ಕೂಡ ಸರ್ಕಾರ ತಾರತಮ್ಯ ಮಾಡ್ತಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆಗೂ ಮುನ್ನ ಕೆಲವು ದಿನಗಳ ಹಿಂದೆ ಕಾಂಗ್ರೆಸ್ನಲ್ಲಿ ಸ್ಫೋಟಗೊಂಡಿದ್ದ ಅನುದಾನ ಅಸಮಾಧಾನದ ಬಾಂಬ್, ಇದೀಗ ಮತ್ತೆ ಸದ್ದು ಮಾಡುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ ಅನುದಾನದ ವಿಚಾರವಾಗಿ ಸ್ಥಳೀಯ ಕಾಂಗ್ರೆಸ್ ಮುಖಂಡರೇ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಶಾಸಕ ಹೆಚ್ಆರ್ ಗವಿಯಪ್ಪ ಹೊಸಪೇಟೆ ಪಾಲಿಗೆ ಶಾಪವಾಗಿದ್ದಾರೆ ಎಂದು ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಕಿಡಿಕಾರಿದ್ದಾರೆ.