ಮಂಡ್ಯ, ನವೆಂಬರ್ 25: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕಾಡಅಂಕನಹಳ್ಳಿ ಗ್ರಾಮದಲ್ಲಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಾಲು ಉತ್ಪಾದಕರು ಹತ್ತಾರು ಲೀಟರ್ ಹಾಲನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಟ್ಟೆ ಸೇರಬೇಕಿದ್ದ ನೂರಾರು ಲೀಟರ್ ಹಾಲು ಮಣ್ಣು ಪಾಲಾಗಿದೆ.
ಗ್ರಾಮದ ಹಾಲು ಉತ್ಪಾದಕರ ಸಂಘವನ್ನು ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಕೊಟ್ಟಿರುವ ಸೂಚನೆಯಂತೆ ಸೂಪರ್ ಸೀಡ್ ಮಾಡಲಾಗಿದೆ ಎಂದು ಹಾಲು ಉತ್ಪಾದಕರು ಆರೋಪಿಸಿದ್ದಾರೆ.
ಸಚಿವರು ದ್ವೇಷದಿಂದ ಹಾಲು ಖರೀದಿಸದಂತೆ ಮನ್ಮುಲ್ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಇಂದು ಡೈರಿಯಲ್ಲಿ ಹಾಲು ಖರೀದಿಸಿಲ್ಲ ಎಂದು ಆರೋಪಿಸಿದ ಹಾಲು ಉತ್ಪಾದಕರು ಹಾಲನ್ನು ರಸ್ತೆಗೆ ಚೆಲ್ಲಿ ಪ್ರತಿಭಟನೆ ಮಾಡಿದ್ದಾರೆ.