Breaking News

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲಗೆ ಬಿದ್ದ 3 ಅಧಿಕಾರಿಗಳು

Spread the love

ಲಂಚ ಪಡೆಯುತ್ತಿದ್ದ ವೇಳೆ ಮೈಸೂರಿನ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲಗೆ ಬಿದ್ದಿದ್ದು, ಮೂವರ ವಿರುದ್ಧ ದೂರು ದಾಖಲಾಗಿದೆ.

ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ ಪೆಕ್ಟರ್ ಗೋವಿಂದರಾಜು, ಎನ್.ಬೆಳ್ತೂರು ಗ್ರಾಮ ಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ.

ಬಿ.ವಿ.ಮಮತಾ ಕುಮಾರಿ ಎಂಬುವವರಿಗೆ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಭೂಮಿ ವಿಚಾರವಾಗಿ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಹಿಂದಿನಂತೆ ದಾಖಲೆ ಯಥಾಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಫೋನ್ ಪೇ ಮೂಲಕ ಮೊದಲ ಹಂತದ ಹಣ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ