Breaking News

ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.

Spread the love

ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.

ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ ಹಳ್ಳಕ್ಕೆ ಮುಗುಚಿ ಬಿದ್ದಿದೆ. ಸ್ಥಳದಲ್ಲಿ ಆದರ್ಶ ಮತ್ತು ಆತನ ಪತ್ನಿ ಶಿವಾನಿ ಆದರ್ಶ ಪಾಂಡವ (20) ಮೃತಪಟ್ಟಿದ್ದಾರೆ.

ಕಾರಿನಲ್ಲಿ ಒಟ್ಟು ಮಕ್ಕಳು ಸೇರಿ ಏಳು ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದು ರೂಪಾಲಿ ಗಾಡೇಕ‌ರ್, ಕುನಾಲ್ ಗಾಡೇಕರ, ರಾಜವೀರ ಪಾಂಡವ, ಅನವಿ ಪಾಂಡವ, ಪೂಜಾ ಬಾಮನೆ ಇವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Spread the loveಬೆಳಗಾವಿ: “ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಈ ಸೋಮವಾರದಿಂದ ಶನಿವಾರದೊಳಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ