Breaking News

ಹಿಂಗಾರು ಹಂಗಾಮಿನ ವಿಮಾ ಬೆಳೆಗಳ ಕಟಾವು ಪ್ರಯೋಗಗಳ ಯೋಜನಾ ಪಟ್ಟಿ ಬಿಡುಗಡೆ…!!

Spread the love

ಧಾರವಾಡ ನವೆಂಬರ 25: 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ ಮಟ್ಟಕ್ಕೆ ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತವಾಗಿರುವ ಬೆಳೆಗಳ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಿಸಿಇ ಸಂರಕ್ಷಣೆ ವೆಬ್ ಪೋರ್ಟಲ್ ದಲ್ಲಿ   ತಯಾರಿಸಿದ ಬೆಳೆ ಕಟಾವು ಪ್ರಯೋಗಗಳ ಕಾರ್ಯ ಯೋಜನಾ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು (ನ.25) ಬೆಳಿಗ್ಗೆ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು.

ವಿಮೆಗೆ ಒಳಪಟ್ಟ ಬೆಳೆಗಳ ಕಟಾವು ಪ್ರಯೋಗ ಕಾರ್ಯನಿರ್ವಹಿಸಲು ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ ರಾಜ್ ಇಲಾಖೆಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಮತ್ತು ಈ ಕಾರ್ಯದ ಮೇಲ್ವಿಚಾರಣೆಗಾಗಿ ಸಾಂಖ್ಯಿಕ, ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳನ್ನು ನೇಮಿಸಿದ್ದು, ಅವರು ಸಿಸಿಇ ನಿಯಮಾವಳಿಗಳ ಅನುಸಾರವಾಗಿ ನಿಗದಿತ ಕಾಲಾವಧಿಯಲ್ಲಿ ವಿಮೆ ಬೆಳೆಗಳ (ಬೆಳೆ ಅಂದಾಜು ಸಮೀಕ್ಷೆ-ಸಿಸಿಇ) ಕಟಾವು ಪ್ರಯೋಗಗಳನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.


Spread the love

About Laxminews 24x7

Check Also

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

Spread the love ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ