Breaking News

ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ

Spread the love

ಬೆಂಗಳೂರು, (ನವೆಂಬರ್ 25):  ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಎಸ್​ಎಲ್​ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್​ಎಸ್​ಎಲ್​ ವರದಿಯಲ್ಲಿ ದೃಢಪಟ್ಟಿದೆ.

ಫೋನ್​ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್​ಅನ್ನು ಎಫ್​ಎಸ್​ಎಲ್​ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು,

ಆಡಿಯೋದಲ್ಲಿರುವುದು ಮುನಿರತ್ನ ಅವರ ಧ್ವನಿ ಎಂದು ದೃಢವಾಗಿದೆ ಎಂದು  ಸಿಐಡಿ ಉನ್ನತ ಮೂಲಗಳಿಂದ ತಿಳಿದುಬಂದಿದೆಚೆಲುವರಾಜು ಜತೆಗೆ ಮಾತನಾಡುವ ವೇಳೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆಂದು ಗುತ್ತಿಗೆದಾರ ವೇಲು ನಾಯ್ಕರ್ ಅವರು ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಅಷ್ಟೇ ಅಲ್ಲದೇ ಮುನಿರತ್ನ ನಿಂದನೆ ಮಾಡಿದ್ದ ಆಡಿಯೋವನ್ನು ಸಹ ಪೊಲೀಸರಿಗೆ ನೀಡಿದ್ದರು. ಈ ದೂರಿನ ಮೇರೆಗೆ ಮುನಿರತ್ನ ವಿರುದ್ಧ ಸೆಪ್ಟೆಂಬರ್ 13 ರಂದು ಎಫ್​ಐಆರ್ ದಾಖಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ