ಕಲಬುರಗಿ/ಬೆಂಗಳೂರು, (ನವೆಂಬರ್ 26): ವಕ್ಪ್ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಅಂತರ್ಯುದ್ಧ ಮುಂದುವರಿದಿದೆ.
ರಾಜ್ಯ ಬಿಜೆಪಿಯಿಂದ ಅಧಿಕೃತವಾಗಿ ವಕ್ಪ್ ಹೋರಾಟ ಕುರಿತ ಪ್ರವಾಸ ತಂಡದಲ್ಲಿ ಸೇರ್ಪಡೆ ಮಾಡಿದ್ದರೂ ಪ್ರತ್ಯೇಕ ಮಿತ್ರಕೂಟದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ತಂಡ ಬೀದರ್ ನಿಂದ ಇಂದು ಜನ ಜಾಗೃತಿ ಅಭಿಯಾನ ಪ್ರಾರಂಭಿಸಿದೆ. ಯತ್ನಾಳ್ ತಂಡದ ಅಭಿಯಾನದಿಂದ ಬೀದರ್ ಜಿಲ್ಲೆಯ ಬಿಜೆಪಿ ಶಾಸಕರು ಅಂತರ ಕಾಯ್ದುಕೊಂಡಿದ್ದರೆ, ಬೀದರ್ ಜಿಲ್ಲಾಧ್ಯಕ್ಷರಂತೂ ಯಾರೋ ಅನಾಮಿಕರು ಬಿಜೆಪಿ ಬ್ಯಾನರ್ ನಲ್ಲಿ ವಕ್ಪ್ ಹೋರಾಟ ಮಾಡುತ್ತಿದ್ದಾರೆ.
ಅನುಮತಿ ಪಡೆಯದೇ ಬಿಜೆಪಿ ಚಿಹ್ನೆ ಬಳಸಿರುವ ಕಾರಣ ಬ್ಯಾನರ್ ತೆರವುಗೊಳಿಸುವಂತೆ ಪೊಲೀಸ್ ದೂರು ನೀಡಿದ್ದಾರೆ. ಇತ್ತ ರಾಜ್ಯ ಬಿಜೆಪಿ ಕೂಡಾ ಯತ್ನಾಳ್ ಹೋರಾಟಕ್ಕೂ ಪಕ್ಷಕ್ಕೂ ಸಂಬಂಧಿವಿಲ್ಲ ಎಂದು ಸ್ಪಷ್ಟಪಡಿಸಿಬಿಟ್ಟಿದೆ. ಇದೆಲ್ಲದರ ಮಧ್ಯ ಯತ್ನಾಳ್, ನಾವು ಹೊಸ ಟೀಂ ಕಟ್ಟೋಣ ಎನ್ನುವ ಸಂದೇಶ ರವಾನಿಸಿದ್ದಾರೆ.
Laxmi News 24×7