Breaking News

ಉಗ್ರರ ಯಾವುದೇ ಚಟುವಟಿಕೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ. ಗೋಡೆ ಬರಹ ಸಂಬಂಧ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ:ಬೊಮ್ಮಾಯಿ

Spread the love

ಉಡುಪಿ: ಕೊರೊನಾ ವೈರಸ್ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡುವ ಕುರಿತು ಸರಕಾರ ಚಿಂತನೆ ಮಾಡಿಲ್ಲ. ಈ ಬಗ್ಗೆ ಯಾವುದೇ ಮಾತುಕತೆಯೂ ಆಗಿಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನ ಸೊಂಕು ಹೆಚ್ಚುತ್ತಿರುವುದು ನಿಜ. ಅದನ್ನು ನಿಯಂತ್ರಣಕ್ಕೆ ತರುವಲ್ಲಿ ಸರಕಾರ ಒತ್ತು ನೀಡುತ್ತಿದೆ. ನೈಟ್ ಕರ್ಪ್ಯೂ ಕುರಿತು ಯಾವ ಚರ್ಚೆಯು ಆಗಿಲ್ಲ ಎಂದು ಅವರು ಹೇಳಿದರು.

ಮಂಗಳೂರಿನಲ್ಲಿ ಉಗ್ರರ ಬೆಂಬಲಿಸಿ ಗೋಡೆ ಬರಹಗಳನ್ನು ಪ್ರಸ್ತಾಪಿಸಿದ ಬೊಮ್ಮಾಯಿ, ಇರಾಕ್, ಆಫ್ಘಾನಿಸ್ತಾನ, ಇರಾನ್ ಸೇರಿದಂತೆ ವಿವಿಧ ದೇಶಗಳಲ್ಲಿ ಈ ರೀತಿ ದಾಳಿಗೂ ಮುನ್ನ ಸೂಚನೆಗಳನ್ನು ನೀಡಲಾಗುತ್ತಿದೆ ಎಂದರು.

ಉಗ್ರರ ಯಾವುದೇ ಚಟುವಟಿಕೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ. ಗೋಡೆ ಬರಹ ಸಂಬಂಧ ಶೀಘ್ರದಲ್ಲೇ ಆರೋಪಿಗಳನ್ನು ಪೊಲೀಸರು ಬಂಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ