ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
: ನಾನೊಬ್ಬಳು ತಾಯಿಯಾಗಿ, ರೈತನ ಮಗಳಾಗಿ, ಹಲವು ಏಳು ಬೀಳುಗಳ ನಡುವೆ ಇಂದು ಕರ್ನಾಟಕದ ಮಂತ್ರಿಯಾಗಿರುವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.
ಅವರು ಇಂದು ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಜ್ಞಾನಶಕ್ತಿ ಆವರಣ, ತೊರವಿ, ವಿಜಯಪುರ ಆಡಳಿತ ಭವನದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಕ್ತಿ ಸಂಭ್ರಮ-2024 ಅಂತರ್ ಮಹಿಳಾ ವಿಶ್ವವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪುರುಷರಿಗೆ 100 ಮೀಟರ್ ಓಡಿದರೂ ಗೋಲ್ಡ್ ಮೆಡಲ್ ಸಿಗುತ್ತದೆ. ಎಲ್ಲಾ ಕ್ಷೇತ್ರದಲ್ಲೂ ಪುರುಷರು ಮುಂದೆ ಬಂದಿದ್ದಾರೆ. ಆದರೆ, ಮಹಿಳೆಯರಿಗೆ ಇನ್ನು ಅವಕಾಶಗಳು ಬೇಕಿರುವುದು ಅತ್ಯವಶ್ಯಕ ಎಂದು ಪ್ರತಿಪಾದಿಸಿದರು. ಕನ್ನಡದ ಪ್ರಪ್ರಥಮ ಮಹಿಳಾ ಕವಿಯತ್ರಿಯಾಗಿ, ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿದ್ದ ಅಕ್ಕಮಹಾದೇವಿ ಅವರು ನಮ್ಮೆಲ್ಲರ ಆದರ್ಶ ಎಂದರು.
.