ಬೆಂಗಳೂರು: ನಾನು ಪರಿಷತ್ ಗೆ ಬಂದಾಗ 9.30ಕ್ಕೆ ಕಲಾಪ ಶುರುವಾಗುತ್ತಿತ್ತು, ರಾತ್ರಿ 8ಕ್ಕೆ ಮುಗಿಯುತ್ತಿತ್ತು. ಈಗ ವಿಧಾನ ಪರಿಷತ್ ಗೌರವ ಕಡಿಮೆ ಆಗುತ್ತಿದೆ. ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ.
ನಮ್ಮ ದೇಶದಲ್ಲಿ ಎಲ್ಲಿಯವರೆಗೆ ದುಡ್ಡು ಕೊಟ್ಟು ವೋಟ್ ಹಾಕಿಸಿಕೊಳ್ಳೋರು, ವೋಟ್ ಹಾಕೋರು ಇರುತ್ತಾರೋ ಅಲ್ಲಿಯವರೆಗೂ ಪ್ರಜಾಪ್ರಭುತ್ವ ಸರಿ ಆಗಲ್ಲ.
ಇದೆಲ್ಲವನ್ನೂ ಕಾಲವೇ ಸುಧಾರಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರ ಆಯ್ಕೆ ವ್ಯವಸ್ಥೆ ಬಗ್ಗೆ ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದ್ದಾರೆ.ಕಲಾಪದಲ್ಲಿ ಭಾಗಿಯಾದ ಎಲ್ಲಾ ಶಾಸಕರ ಬಗ್ಗೆ ನನಗೆ ಮಾಹಿತಿ ಗೊತ್ತಿದೆ. ಅವರು ಏನು ಚರ್ಚೆ ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ಎಲ್ಲರಿಗೂ ಗಾಢ್ಫಾದರ್ ಇದ್ದಾರೆ.
ಆದರೆ, ನನಗೆ ಯಾರೂ ಇಲ್ಲ. ರಾಜಕೀಯಕ್ಕೆ ನನ್ನನ್ನು ಯಾರೂ ಕರೆತಂದಿಲ್ಲ. ನಾನೇ ನನ್ನ ಸ್ವಂತ ಶಕ್ತಿಯಿಂದ ರಾಜಕೀಯಕ್ಕೆ ಬಂದಿದ್ದೇನೆ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
Laxmi News 24×7