Breaking News

ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್

Spread the love

ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವ ಪದವೀಧರರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು.

ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಸ್ಥಳ ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯ ಯಾವುದೇ ಭಾಗದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ ರೂ. 24,050 ರಿಂದ ರೂ.64,480ರವರೆಗೆ ಇರಲಿದೆ.

ಯಾವುದೇ ವಿಷಯಗಳಲ್ಲಿ ಪದವಿ ಶಿಕ್ಷಣವನ್ನು ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಗಳು/ ಬೋರ್ಡ್ ಗಳಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 26 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅಭ್ಯರ್ಥಿಗಳು ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಆಯ್ಕೆ ಪ್ರಕ್ರಿಯೆ ಆನ್ ಲೈನ್ ಮೂಲಕ ನಡೆಯಲಿದೆ. ಪರೀಕ್ಷೆಗಳು ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ,ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ, ಕಲಬುರ್ಗಿ ಜಿಲ್ಲೆಗಳಲ್ಲಿ ನಡೆಯಲಿದೆ.

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನವೆಂಬರ್ .30. ಡಿಸೆಂಬರ್ 15 ರಂದು ಪರೀಕ್ಷೆ ನಿಗದಿಯಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ