ಬೆಂಗಳೂರು: ಪಕ್ಷದ ರಾಜ್ಯಾಧ್ಯನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ಹೇಳಿದರು. ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ, ಇದು ಸರಿಯಲ್ಲ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷನಾಗಿ ಹೈಕಮಾಂಡ್ ಗೆ ಎರಡು ಬಾರಿ ಪತ್ರ ಬರೆದರೂ ಅವರಿಂದ ಯಾವುದೇ ಕ್ರಮ ಜರುಗಿಲ್ಲ ಎಂದು ಹೇಳಿದರು.
Laxmi News 24×7