Breaking News

ಸಂಪುಟ ಪುನರ್ ರಚನೆಗೆ ‘ಕೈ’ ಕಮಾಂಡ್ ಬ್ರೇಕ್

Spread the love

ನವೆಂಬರ್ 29: ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಕಾಂಗ್ರೆಸ್ ಕ್ಲೀನ್​​ಸ್ವೀಪ್ ಮಾಡಿತ್ತು. ಭರ್ಜರಿ ಗೆಲುವು ದೊರೆಯುತ್ತಿದ್ದಂತೆಯೇ ರಾಜ್ಯ ಸಂಪುಟ ಪುನರ್ ರಚನೆಯ ಸುದ್ದಿ ಮುನ್ನೆಲೆಗೆ ಬಂದಿತ್ತು. ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಬವದಂತಿಗಳೂ ಹರಿದಾಡಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ರಾಜ್ಯ ನಾಯಕರು ಮಾತನಾಡಿದ್ದರು. ಅತ್ತ ಸಚಿವಕಾಂಕ್ಷಿಗಳು ಲಾಬಿ ಶುರು ಮಾಡಿದ್ದರು. ಇತ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ದೌಡಾಯಿಸಿದ್ದರು. ಇನ್ನೇನು ಸಂಪುಟ ಪುನರ್ ರಚನೆ ಆಗುತ್ತದೆ ಎಂದು ಆಸೆ ಕಂಗಳಿಂದ ಕಾಯುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ತಣ್ಣೀರು ಎರಚಿದೆ.

ಸದ್ಯಕ್ಕಿಲ್ಲ ಕರ್ನಾಟಕ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಕಾಂಗ್ರೆಸ್ ಹೈಕಮಾಂಡ್ ತಡೆ

ದೆಹಲಿಯಲ್ಲಿ ಗುರುವಾರ ಹೈಕಮಾಂಡ್ ಮಟ್ಟದ ನಾಯಕರು ಸಭೆ ನಡೆಸಿದರು. ಸಂಪುಟ ಪುನರ್ ರಚನೆಗೆ ಸದ್ಯದ ಪರಿಸ್ಥಿತಿ ಪಕ್ವವಾಗಿಲ್ಲ ಎಂಬ ಸಂದೇಶವನ್ನು ಈ ಸಭೆ ರವಾನಿಸಿದೆ.

ಸಂಪುಟ ಪುನರ್ ರಚನೆಗೆ ‘ಕೈ’ ಕಮಾಂಡ್ ಬ್ರೇಕ್

ಕರ್ನಾಟಕದಲ್ಲಿ ಸದ್ಯಕ್ಕೆ ಸಂಪುಟ ಪುನರ್ ರಚನೆ ಬೇಡ ಎಂದು ಹೈಕಮಾಂಡ್ ಹೇಳಿದೆ. ಉಳಿದಂತೆ ಖಾಲಿ ಉಳಿದಿರುವ ಸ್ಥಾನಗಳನ್ನು ತುಂಬಲು ಹಸಿರು ನಿಶಾನೆ ತೋರಿದೆ. ಬಿ. ನಾಗೇಂದ್ರರಿಂದ ತೆರವಾದ ಸ್ಥಾನಕ್ಕೆ ಭರ್ತಿಗೆ ಸೂಚಿಸಲಾಗಿದೆ. ಕೆಲವು ಸಚಿವರು ತಮ್ಮ ಖಾತೆ ನಿಭಾಯಿಸಲು ವಿಫಲರಾಗಿದ್ದು, ಅಂತಹ ಸಚಿವರ ಖಾತೆ ಅದಲು ಬದಲಾಗುವ ಸಾಧ್ಯತೆ ಇದೆ. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಿರುತ್ಸಾಹ ತೋರಿದೆ. ಈಗ ಸ್ಥಾನ ಬದಲಾಯಿಸಿದರೆ ತಪ್ಪು ಸಂದೇಶ ರವಾನೆ ಸಾಧ್ಯತೆ ಇದೆ ಎಂಬುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ