ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲೋದಿಲ್ಲ, ಡಿಸೆಂಬರ್ 10ರಂದು ಬೇರೆಯವರು ಜೊತೆಗೂಡದಿದ್ದರೂ ತಾನು ಹೋರಾಟ ಮುಂದುವರಿಸುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪಂಚಮಸಾಲಿ ಮೀಸಲಾತಿಯಲ್ಲದೆ ಕೇಂದ್ರ ಸರ್ಕಾರವು ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂತಲೂ ಹೋರಾಟ ನಡೆಸಲಾಗುವುದು ಎಂದು ಯತ್ನಾಳ್ ಹೇಳಿದರು. ಬಿಜೆಪಿ ಅಧಿಕಾರಲ್ಲಿದ್ದಾಗ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ಮಾಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಮೌನವಾಗಿರುವುದನ್ನು ಗೇಲಿ ಮಾಡಿದ ಯತ್ನಾಳ್ ಅವರಿಗೆ ನಿಜಕ್ಕೂ ಸಮುದಾಯದ ಬಗ್ಗೆ ಕಾಳಜಿಯಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟದಲ್ಲಿ ಕೈ ಜೋಡಿಸಲಿ ಎಂದರು.
Laxmi News 24×7