Breaking News

ಪಂಚಮಸಾಲಿ ಮೀಸಲಾತಿ ಜೊತೆ ಕೇಂದ್ರ ಸರ್ಕಾರ ಲಿಂಗಾಯತರನ್ನು ಒಬಿಸಿಗೆ ಸೇರಿಸುವಂತೆಯೂ ಹೋರಾಟ: ಯತ್ನಾಳ್

Spread the love

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲೋದಿಲ್ಲ, ಡಿಸೆಂಬರ್ 10ರಂದು ಬೇರೆಯವರು ಜೊತೆಗೂಡದಿದ್ದರೂ ತಾನು ಹೋರಾಟ ಮುಂದುವರಿಸುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಪಂಚಮಸಾಲಿ ಮೀಸಲಾತಿಯಲ್ಲದೆ ಕೇಂದ್ರ ಸರ್ಕಾರವು ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಬೇಕೆಂತಲೂ ಹೋರಾಟ ನಡೆಸಲಾಗುವುದು ಎಂದು ಯತ್ನಾಳ್ ಹೇಳಿದರು. ಬಿಜೆಪಿ ಅಧಿಕಾರಲ್ಲಿದ್ದಾಗ ಪಂಚಮಸಾಲಿ ಮೀಸಲಾತಿಗಾಗಿ ಹೋರಾಟ ಮಾಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಮೌನವಾಗಿರುವುದನ್ನು ಗೇಲಿ ಮಾಡಿದ ಯತ್ನಾಳ್ ಅವರಿಗೆ ನಿಜಕ್ಕೂ ಸಮುದಾಯದ ಬಗ್ಗೆ ಕಾಳಜಿಯಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟದಲ್ಲಿ ಕೈ ಜೋಡಿಸಲಿ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ