Breaking News

ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ

Spread the love

ಮಂಡ್ಯ, ನವೆಂಬರ್ 29: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಮುಂದಾಗಿದೆ. ಎಫ್​ಐಆರ್​ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಎಫ್​ಐಆರ್ ದಾಖಲಾದರೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ. ಯಾಕೆಂದರೆ, ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ ಪ್ರಸ್ತಾಪವಾಗಿದೆ.

ದೂರುದಾರ ಸಲ್ಲಿಸಿರುವ ಅಧಿಕಾರಿ ಮತ್ತು ದೂರುದಾರನ ಮಧ್ಯೆ ನಡೆದಿದೆ ಎನ್ನಲಾದ ಸಂಭಾಷಣೆಯಲ್ಲಿ ಸಚಿವರ ಬಗ್ಗೆ ಪ್ರಸ್ತಾಪವಾಗಿದೆ. ಈ ವಿಚಾರ ಇಟ್ಟುಕೊಂಡು ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಲಂಚದಲ್ಲಿ ಸಚಿವರಿಗೂ ಪಾಲು: ಜೆಡಿಎಸ್ ವಾಗ್ದಾಳಿ

ಬಾರ್ ಲೈಸೆನ್ಸ್​ನಲ್ಲಿಯೂ ಲಂಚ ವಸೂಲಿ ನಡೆಯುತ್ತಿದೆ. ಸಚಿವರ ಮುಂದಾಳತ್ವದಲ್ಲೇ ಅಧಿಕಾರಿಗಳು ರೇಟ್ ಫಿಕ್ಸ್ ಮಾಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸಚಿವರಿಗೂ ಪಾಲು ಹೋಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಗಂಭೀರ ಆರೋಪ ಮಾಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ