ನವದೆಹಲಿ,ಡಿ.3- ರ್ಜೂನಿಯರ್ ಇಂಜಿನಿಯರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಂಜಾಬ್‍ನ ನಿವೃತ್ತ ಪೊಲೀಸ್ ಮಹಾನಿರ್ದೆಶಕ ಸುಮೇಂದ್‍ಸಿಂಗ್ ಶೈನಿ ಅವರಿಗೆ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್, ಆರ್.ಸುಭಾಷ್‍ರೆಡ್ಡಿ, ಎಂ.ಆರ್.ಶಾ ಅವರುಗಳನ್ನೊಗೊಂಡ ವಿಭಾಗೀಯ ಪೀಠ 29 ವರ್ಷದ ಹಳೆಯ ಪ್ರಕರಣದಲ್ಲಿ ಶೈನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
1991ರಲ್ಲಿ ಚಂಡೀಗಢದ ಕೈಗಾರಿಕಾ ಮತ್ತು ಪ್ರವಾಸೋದ್ಯಮ ನಿಗಮದ ಹಿರಿಯ ಇಂಜಿನಿಯರ್ ಮುಲ್ತಾನಿ ಅವರ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಪಂಜಾಬ್‍ನ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶೈನಿ ಅವರನ್ನು ಆರೋಪಿ ಎಂದು ಗುರುತಿಸಲಾಗಿದೆ.ಜಾಮೀನು ನಿರಾಕರಣೆ ಮಾಡಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿದ್ದವು. ಇದನ್ನು ಪ್ರಶ್ನಿಸಿ ಶೈನಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಶೈನಿ ಅವರಿಂದ ಒಂದು ಲಕ್ಷ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತೆ ಪಡೆದು ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸೂಚನೆ ನೀಡಿದೆ.