ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ…
ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ
ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ತೊಂದರೆ
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ…
ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ
ಸಮಾಜ ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ
ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ಅನಾನುಕೂಲ ಮಾಡುತ್ತಿರುವ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಗಾವಿಯ ಸಮಾಜ ಕಲ್ಯಾಣ ಇಲಾಖೆ ಕಾರ್ಯಲಯದ ಎದುರು ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಪ್ರವೀಣ್ ಮಾದರ, ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿ ಅನಾನುಕೂಲ ಮಾಡುತ್ತಿದ್ದಾರೆ. ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ತೊಂದರೆ ನೀಡುತ್ತಿರುವ ಈ ಅಧಿಕಾರಿಯನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.
ಈ ವೇಳೆ ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.