ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ, ಬಸ್ ಪಲ್ಟಿಯಾಗಿ 8 ಮಂದಿ ಸಾವು
ಮಹಾರಾಷ್ಟ್ರದ ಗೊಂಡಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ 10 ಲಕ್ಷ ರೂ.ಗಳ ನೆರವು ನೀಡುವಂತೆ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆದೇಶ ಹೊರಡಿಸಿದ್ದಾರೆ.