Breaking News

ಅಧಿವೇಶನದ ತದ್ವಿರುದ್ಧವಾಗಿ ಮಹಾಮೇಳಾವಾಪೊಲೀಸ್ ಇಲಾಖೆ ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಮಹಾಂತೇಶ ರಣಗಟ್ಟಿಮಠ

Spread the love

ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಚಳಿಗಾಲದ ಅಧಿವೇಶನದ ತದ್ವಿರುದ್ಧವಾಗಿ ಮಹಾಮೇಳಾವಾ ಆಯೋಜಿಸಲು ಅನುಮತಿ ನೀಡದಂತೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಬೆಳಗಾವಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಚಳಿಗಾಲದ ಅಧಿವೇಶನದ ತದ್ವಿರುದ್ಧವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಮಹಾಮೇಳಾವಾ ಜಿಲ್ಲಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಲಾಗಿದ್ದು, ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದೆಂದು ಆಗ್ರಹಿಸಲಾಯಿತು .

ಈ ವೇಳೆ ಮಾತನಾಡಿದ ಪ್ರತಿಭಟನಾಕಾರ ವಾಜಿದ್ ಹಿರೇಕೂಡಿ ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಎಂಇಎಸ್ ಗೆ ಮಹಾಮೇಳಾವಾ ಆಯೋಜಿಸಲು ಅನುಮತಿ ನೀಡಬಾರದು. ಒಂದು ವೇಳೆ ಮಹಾಮೇಳಾವಾ ಆಯೋಜಿಸಿದರೆ ಬೆಂಗಳೂರಿನಿಂದ ಜನರನ್ನ ಕರೆಯಿಸಿ ಬೆಳಗಾಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ರಣಗಟ್ಟಿಮಠ ಅವರು ಪೊಲೀಸ್ ಇಲಾಖೆ ಎಂಇಎಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅಧಿವೇಶನದ ವಿರುದ್ಧವಾಗಿ ಮಹಾಮೇಳಾವಾ ಆಯೋಜಿಸುತ್ತಿರುವ ಎಂಇಎಸ್ ಮುಖಂಡರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರುಮ

ಈ ವೇಳೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.


Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ