Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ತಾಂತ್ರಿಕ ಸಮಿತಿ ಶಿಫಾರಸು

ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ತಾಂತ್ರಿಕ ಸಮಿತಿ ಶಿಫಾರಸು

Spread the love

ಬೆಂಗಳೂರು, ಡಿ.3- ರಾಜ್ಯದಲ್ಲಿ ಮುಂದಿನ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗುವ ಸಾಧ್ಯತೆಗಳಿರುವುದಾಗಿ ಕೋವಿಡ್ ತಾಂತ್ರಿಕ ಸಮಿತಿ ಹೇಳಿದ್ದು, ಈ ಭೀತಿ ನಡುವೆಯೇ ಜನವರಿಯಿಂದಲೇ 10 ಮತ್ತು 12ನೆ ತರಗತಿ ಮಕ್ಕಳಿಗೆ ಶಾಲೆಗಳನ್ನು ಆರಂಭಿಸಬಹುದು. ಬಳಿಕ 9 ಮತ್ತು 11ನೆ ತರಗತಿ ಮಕ್ಕಳಿಕೆ ಶಾಲೆ ಆರಂಭಿಸಬಹುದು ಎಂದು ಶಿಫಾರಸು ಮಾಡಿದೆ.

ಸಮಿತಿಯ ಈ ಶಿಫಾರಸು ಸರ್ಕಾರವನ್ನು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಕೊರೊನಾ ತಾಂತ್ರಿಕ ಸಮಿತಿ ಈ ಹಿಂದೆ ನೀಡಿದ್ದ ವರದಿ ಆಧರಿಸಿ ನ.23ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಯ ಉನ್ನತಮಟ್ಟದ ಸಭೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಶಾಲೆ ಆರಂಭಿಸದಿರಲು ತೀರ್ಮಾನ ಕೈಗೊಂಡಿತ್ತು.

ಡಿಸೆಂಬರ್ ಮೂರನೆ ವಾರ ಮತ್ತೆ ಸಭೆ ಸೇರಿ ಕೋವಿಡ್ ತಾಂತ್ರಿಕ ಸಮಿತಿ ನೀಡುವ ಮುಂದಿನ ವರದಿ ಆಧರಿಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದರು. ಈಗ ಕೋವಿಡ್ ತಾಂತ್ರಿಕ ಸಮಿತಿ ಮತ್ತೊಂದು ವರದಿ ನೀಡಿ, ಶಾಲೆ ಆರಂಭಕ್ಕೆ ಶಿಫಾರಸು ಮಾಡಿದೆ.

# ಸಮಿತಿಯ ಶಿಫಾರಸುಗಳು:
ಫೆಬ್ರವರಿವರೆಗೂ ನಿತ್ಯ 1.25 ಲಕ್ಷ ಪರೀಕ್ಷೆ ನಡೆಸಬೇಕು. ಹಬ್ಬ, ಹರಿದಿನ, ಧಾರ್ಮಿಕ, ರಾಜಕೀಯ ಇನ್ನಿತರೆ ಯಾವುದೇ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನ ಸೇರುವುದಕ್ಕೆ ನಿರ್ಬಂಧ ಮುಂದುವರೆಸಬೇಕು. ಜನವರಿ ಮೊದಲ ವಾರದಲ್ಲಿ ಆಂಬುಲೆನ್ಸ್, ಕ್ಲಿನಿಕಲ್ ವ್ಯವಸ್ಥೆಗಳಾದ ಐಸಿಯು, ವೆಂಟಿಲೇಟರ್‍ಗಳನ್ನು ಸಿದ್ಧವಿಟ್ಟುಕೊಂಡಿರಬೇಕು. ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ಕೋವಿಡ್ 2ನೆ ಅಲೆ ಹರಡುವ ಸಾಧ್ಯತೆಗಳಿರುವುದರಿಂದ ಡಿಸೆಂಬರ್ 26ರಿಂದ ಜನವರಿ 1ರವರೆಗೆ ರಾತ್ರಿ 8 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ವಿಧಿಸಬೇಕು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ