Breaking News
Home / ಜಿಲ್ಲೆ / ಹಾವೇರಿ / ಸರ್ಕಾರಿ ಬಸ್ಸಿಗೆ ಶಾಸಕ ವಿರೂಪಾಕ್ಷಪ್ಪ ಪುತ್ರನ ಕಾರು ಡಿಕ್ಕಿ

ಸರ್ಕಾರಿ ಬಸ್ಸಿಗೆ ಶಾಸಕ ವಿರೂಪಾಕ್ಷಪ್ಪ ಪುತ್ರನ ಕಾರು ಡಿಕ್ಕಿ

Spread the love

ಹಾವೇರಿ: ಜಿಲ್ಲೆ ಬ್ಯಾಡಗಿ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪನವರ ಪುತ್ರ ಯುವರಾಜ ಬಳ್ಳಾರಿ ಚಲಾಯಿಸುತ್ತಿದ್ದ ಕಾರ್ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಆದರೆ ಕಾರಿನ ಮುಂಭಾಗ ಹಾಗೂ ಬಸ್ಸಿನ ಹಿಂಭಾಗ ಜಖಂ ಆಗಿದೆ.ವಿರೂಪಾಕ್ಷಪ್ಪನವರ ಪುತ್ರ ಯುವರಾಜ, ಹಾವೇರಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದಾಗ ಈ ಘಟನೆ ನಡೆದಿದೆ. ಕಾರಿನಿಂದ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆಯಲಾಗಿದೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಅದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು: ಬೊಮ್ಮಾಯಿ

Spread the loveಹಾವೇರಿ: ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲಾ ಎಂಬ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ ಎಂಬ ವದಂತಿ ಹಬ್ಬುತ್ತಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ