Breaking News

ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ: ಬಸನಗೌಡ ಪಾಟೀಲ್

Spread the love

ಬಾಗಲಕೋಟೆ: ಬಿಜೆಪಿಯಲ್ಲಿ ಎರಡು ಬಣಗಳ ಹೋರಾಟ ನಡೆಯುತ್ತಿದೆ ಎಂಬ ಅಂಶವನ್ನು ಶಾಸಕ ಬಸನಗೌಡ ಪಾಟೀಲ್ ಅಲ್ಲಗಳೆದರು.

ಜಿಲ್ಲೆಯ ಬನಹಟ್ಟಿಯಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು ತಮ್ಮ ತಂಡ ಯಾರ ವಿರುದ್ಧವೂ ಹೋರಾಟ ಮಾಡುತ್ತಿಲ್ಲ, ಕೇವಲ ವಕ್ಫ್ ವಿರುದ್ಧ ಮಾತ್ರ ಹೋರಾಟ ಮಾಡುತ್ತಿದೆ,

ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ ಮಾಡುತ್ತಿದ್ದೇವೆ,

ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತಂದು ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಮ್ಮ ಸಮಿತಿ ಕೆಲ ಸಲಹೆಗಳನ್ನು ಕೇಂದ್ರ ಸರ್ಕಾರಕ್ಕೆ ನೀಡಲಿದೆ, ಪ್ರತಾಪಸಿಂಹ, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಜಿ ಎಮ್ ಸಿದ್ದೇಶ್ವರ ಮತ್ತು ತನ್ನನ್ನು ಒಳಗೊಂಡ ನಿಯೋಗವೊಂದು 2ನೇ ತಾರೀಖು ದೆಹಲಿಗೆ ಹೋಗಿ ತಾವು ನಡೆಸಿದ ಹೋರಾಟದ ಬಗ್ಗೆ ಒಂದು ಮಧ್ಯಂತರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲಿದ್ದೇವೆ ಎಂದು ಯತ್ನಾಳ್ ಹೇಳಿದರು.


Spread the love

About Laxminews 24x7

Check Also

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Spread the loveಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ