Breaking News

ವಿಜಯಪುರ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ

Spread the love

ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ

: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಇವಣಗಿ ಗ್ರಾಮದಲ್ಲಿ ಡಿ.2 ರಂದು ನಡೆಯಲಿರುವ 10ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ.

ಗ್ರಾಮದ ಲಕ್ಕಮ್ಮದೇವಿ ದೇವಸ್ಥಾನದ ಆವರಣದಲ್ಲಿ ವೇದಿಕೆ ಸಿದ್ದಗೊಂಡಿದೆ. ಸಮ್ಮೇಳನದ ಯಶಸ್ವಿಗಾಗಿ ಕಸಾಪ ಪದಾಧಿಕಾರಿಗಳು, ಸಮ್ಮೇಳನದ ವಿವಿಧ ಸಮಿತಿಗಳ ಸದಸ್ಯರು, ಶಿಕ್ಷಕರು, ವಿವಿಧ ಸಂಘಟನೆ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.

ಗ್ರಾಮದ ವಿವಿಧೆಡೆ ಸಮ್ಮೇಳನಕ್ಕೆ ಸ್ವಾಗತ ಕೋರುವ ಗೋಡೆ ಬರಹಗಳನ್ನು ಚಿತ್ರ ಕಲಾವಿದರು ಬಿಡಿಸುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಸ್ವಾಗತ ಕಮಾನುಗಳು, ಸ್ವಾಗತ ಕೋರುವ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಇನ್ನೂ ಡಿ 2 ರಂದು ಬೆಳಿಗ್ಗೆ 8ಕ್ಕೆ ಧ್ವಜಾರೋಹಣ ಸಮಾರಂಭ ನಡೆಯುವುದು, 8-30ಕ್ಕೆ ತಾಲ್ಲೂಕಿನ ವಿವಿಧ ಕಲಾ ತಂಡಗಳೊಂದಿಗೆ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ.

ಬೆಳಿಗ್ಗೆ 10ಕ್ಕೆ ನಡೆಯಲಿರುವ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಸಿದ್ಧಲಿಂಗ ಸ್ವಾಮೀಜಿ ಸಾನಿಧ್ಯ ವಹಿಸುವರು, ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಉದ್ಘಾಟನೆ ನೆರವೇರಿಸಲಿದ್ದು ಶಾಸಕ ರಾಜುಗೌಡ ಪಾಟೀಲ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದು ಕಸಾಪ ಜಿಲ್ಲಾಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಧ್ಯಕ್ಷತೆ ವಹಿಸಲಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ