Breaking News

ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಅತ್ಯಾಚಾರ,….?

Spread the love

ಮಂಡ್ಯ: ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ.ಕೊಲೆಯಾದಬ ಅಪ್ರಾಪ್ತ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮೊದಲಿಗೆ ಯಾರೋ ಇಬ್ಬರು ಬಾಲಕಿಯನ್ನ ಎಳೆದುಕೊಂಡು ಹೋಗುತ್ತಿದ್ದಾಗ ನಾನು ಆಕೆಯನ್ನ ಬಿಡಿಸಲು ಹೋಗಿದ್ದೆ. ನಂತರ ಭಯವಾಗಿ ಗದ್ದೆಯಲ್ಲಿ ಅವಿತು ಕುಳಿತಿದ್ದೆ ಎಂದು ಹೇಳಿದ್ದನು. ಅಪ್ರಾಪ್ತನ ನಡವಳಿಕೆ ಬಗ್ಗೆ ಮೃತ ಬಾಲಕಿಯ ಸಂಬಂಧಿಕರು ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು.

ಏನಿದು ಪ್ರಕರಣ?: ಬಾಲಕಿ ಮೂಲತಃ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಿವಾಸಿ. ಬಾಲಕಿ ಕುಟುಂಬಸ್ಥರ ಜೊತೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗ್ರಾಮಕ್ಕೆ ಬಂದಿದ್ದಳು. ಬುಧವಾರ ಕಬ್ಬು ಕಟಾವಿಗೆ ಬಾಲಕಿ ಗದ್ದೆಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನ ಎಳೆದೊಯ್ದ ಕಾಮುಕ ಕಿರಾತಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಬಾಲಕಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದು ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ಹೋಗಿದ್ದರು.


Spread the love

About Laxminews 24x7

Check Also

ಬಾಲಕಿಗೆ ಲೈಂಗಿಕ ಕಿರುಕುಳ; ಇಬ್ಬರು ಆಟೋ ಚಾಲಕರ ಬಂಧನ

Spread the loveದಾವಣಗೆರೆ: ಆಟೋ‌ ಚಾಲಕರಿಬ್ಬರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಆರ್​ಎಂಸಿ ಯಾರ್ಡ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ