ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಿಂದ ಬೋರಗಾಂವ ರೇಣುಕಾ ಮಂದಿರದವರೆಗೆ ಒಟ್ಟು 5 ಕಿ ಮೀ ರಸ್ತೆ ಡಾಂಬರೀಕರಣಕ್ಕಾಗಿ 5.25 ಕೋಟಿ ರೂಪಾಯಿ ಮಂಜೂರಾಗಿದೆ. ಶೀಘ್ರುದಲ್ಲಿಯೇ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ತಿಳಿಸಿದರು.
ಸದಲಗಾ ಬೋರಗಾಂವ ರಸ್ತೆ ಪರಿಶೀಲಿಸಿ ಮಾತನಾಡಿದ ಅವರು, ರಸ್ತೆ ಪ್ರವಾಹದಿಂದ ಹಾಳಾಗಿದ್ದು, ತಗ್ಗು ಗುಂಡಿಗಳಿಂದಾಗಿ ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಗಮನಕ್ಕೆ ತರಲಾಗಿತ್ತು. ಸ್ಪಂದಿಸಿದ ಸಚಿವರು ಲೋಕೋಪಯೋಗಿ ಇಲಾಖೆ ಯಿಂದ ನಿಧಿ ಮಂಜೂರು ಮಾಡಿಸಿದ್ದಾರೆ ಎಂದರು.
ಸದಲಗಾ ಸರಕಾರಿ ಪಾಲಿಟೆಕ್ನಿಕ್ ಸಂರಕ್ಷಣೆ ಗೋಡೆ, ಮೂರು ತರಗತಿ ಕೊಠಡಿ, 6 ಲ್ಯಾಬ್‌ಗಳು, ಎರಡು ಶೌಚಾಲಯ ಕಾಮಗಾರಿಗಾಗಿ 4 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದರು.