ಬೆಳಗಾವಿ ನೆಹರುನಗರದ ಮೂರನೇ ಕ್ರಾಸನಲ್ಲಿ 6 ತಿಂಗಳ ಹಿಂದೆ ನಿರ್ಮಿಸಿದ ರಸ್ತೆಯಲ್ಲಿ ಗುಂಡಿ ಬಿದ್ದು ಸಂಚಾರಕ್ಕೆ ಅನಾನುಕೂಲವಾಗಿದೆ.
ಬೆಳಗಾವಿ ನೆಹರುನಗರದ ಮೂರನೇ ಕ್ರಾಸನಲ್ಲಿ 6 ತಿಂಗಳ ಹಿಂದೆ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ರಸ್ತೆಯನ್ನು ನಿರ್ಮಿಸಲಾಗಿತ್ತು. ಆದರೇ ಈಗ ಈ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಇಲ್ಲಿರುವ ಡಿ ಮಾರ್ಟ್ ಮತ್ತು ಆಸ್ಪತ್ರೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ. ಕೂಡಲೇ ಸಂಬಂಧಿಸಿದವರು ರಸ್ತೆಯ ದುರಸ್ಥಿಗೆ ಮುಂದಾಗಬೇಕೆಂದು ಒತ್ತಾಯಿಸಲಾಗಿದೆ.