Breaking News

ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ

Spread the love

ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಆದೇಶಿಸಿದರು.

ಸಮಸ್ಯೆಗಳನ್ನು ಆಲಿಸಿ, ಮಾಹಿತಿ ಪಡೆದುಕೊಂಡರು. ಮಾಹಿತಿ ಕೊರತೆಯಿಂದ ಸಭೆಯಲ್ಲಿ ಉತ್ತರಿಸಲು ಪರದಾಡಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ನದಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು.

ಕಿಂಡಿ‌ ಅಣೆಕಟ್ಟು ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬುದರ ವೈಜ್ಞಾನಿಕ ವರದಿಯನ್ನು ನೀಡಲು ಸೂಚನೆ ನೀಡಿದ ಸಚಿವರು, ನಗರಾಭಿವೃದ್ಧಿ ಅನುದಾನ ದಲ್ಲಿ 15 ದಿನಗಳಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ