Breaking News

ಬಿಜೆಪಿ ಶಿಸ್ತು ಸಮಿತಿ ನೋಟಿಸ್: ಬಸನಗೌಡ ಪಾಟೀಲ್ ಯತ್ನಾಳ್ ಮೊದಲ ಪ್ರತಿಕ್ರಿಯೆ

Spread the love

ಡಿಸೆಂಬರ್ 2: ಪಕ್ಷ ವಿರೋಧಿ ಚಟುವಟಿಕೆ, ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಸತತ ಹೇಳಿಕೆಗಳನ್ನು ನೀಡುವುದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. 10 ದಿನಗಳ ಒಳಗಾಗಿ ಉತ್ತರಿಸುವಂತೆಯೂ ಇಲ್ಲವಾದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಯತ್ನಾಳ್​ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಶೋಕಾಸ್ ನೋಟಿಸ್ ಬಗ್ಗೆ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ಶೋಕಾಸ್ ನೋಟಿಸ್ ನೀಡಿರುವ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಯತ್ನಾಳ್, ರಾಜ್ಯ ಬಿಜೆಪಿಯ ಸ್ಥಿತಿಯ ಬಗ್ಗೆ ಹೈಕಮಾಂಡ್​ಗೆ ವಿವರ ಸಲ್ಲಿಸುವುದಾಗಿ ತಿಳಿಸಿದ್ದಾರೆ.ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಅವರ ಮುಂದೆ ಪ್ರಸ್ತುತಪಡಿಸುತ್ತೇನೆ. ಹಿಂದುತ್ವದ ಪರ ಹೋರಾಟ, ಭ್ರಷ್ಟಾಚಾರದ ವಿರುದ್ಧದ ಹೋರಾಟ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶ ರಾಜಕಾರಣದ ವಿರುದ್ಧದ ಹೋರಾಟ ಸಂಬಂಧ ನನ್ನ ಬದ್ಧತೆ ಅಚಲವಾಗಿ ಇರಲಿದೆ ಎಂದು ಯತ್ನಾಳ್ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ