ಬೆಂಗಳೂರು: ಬಿಜೆಪಿ ಪಕ್ಷದ ನಾಯಕರಾದ ಸಿ.ಪಿ.ಯೋಗೇಶ್ವರ್,ಎನ್.ಆರ್.ಸಂತೋಷ ಹಾಗೂ ಎಚ್.ವಿಶ್ವನಾಥ್ ಅವರನ್ನು ಬಂಧಿಸಿ ತನಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಆನಂದ್ ರಾವ್ ವೃತ್ತದ ಬಳಿ ಇರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ವಿಧನಾ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ವಿರುದ್ದ ಘೋಷಣೆ ಕೂಗಿದರು.
ಇಬ್ಬರೂ ನಾಯಕರು ಬಿಜೆಪಿ ಸರ್ಕಾರ ರಚನೆ ಮಾಡುವ ವೇಳೆ, ಚುನಾವಣೆ ಸಂದರ್ಭದಲ್ಲಿ ಅಕ್ರಮ ಹಣ ಬಳಸಿರುವುದು ಬಹಿರಂಗೊಂಡಿದೆ. ಕೇಂದ್ರ ಸರ್ಕಾರ ಕಪ್ಪು ಹಣ ಹೊಂದಿರುವವರ ವಿರುದ್ಧ ಕ್ರಮ ಜರುಗಿಸುತ್ತಿದೆ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಾರೆ. ಆದರೆ ತಮ್ಮ ಪಕ್ಷದ ನಾಯಕರ ವಿರುದ್ಧ ಮಾತ್ರ ದಿವ್ಯ ಮೌನ ವಹಿಸುತ್ತಾರೆ ಎಂದು ಕಿಡಿ ಕಾರಿದರು.
ತಕ್ಷಣ ಸರ್ಕಾರ ಇವರನ್ನು ಬಂಧಿಸಿ, ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.