ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ತುಮಕೂರು ಹೊರವಲಯದ ಸೋರೆಕುಂಟೆ ಬಳಿಯ ಪಿ.ಗೊಲ್ಲಹಳ್ಳಿಗೆ ಆಗಮಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು.
ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ನಲ್ಲಿ ಆಗಮಿಸದೇ ಬೆಂಗಳೂರಿನಿಂದ ರಸ್ತೆ ಮೂಲಕ ಆಗಮಿಸಿ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ನಂತರ ಗುದ್ದಲಿ ಪೂಜೆ ಕೂಡ ನೆರವೇರಿಸಿದರು.
ಆನಂತರ ಕ್ರಿಕೆಟ್ ಪಿಚ್ನಲ್ಲಿ ಸಾಂಕೇತಿಕವಾಗಿ ಬ್ಯಾಟಿಂಗ್ ಆಡಿದರು.
ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ, ಮೈಸೂರಿನಲ್ಲಿಯೂ ಕ್ರಿಕೆಟ್ ಸ್ಟೇಡಿಂಗ್ ನಿಮಾಣಕ್ಕೆ ಜಾಗ ಕೊಡಲಾಗುವುದು. ಇವತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅವರು ತುಮಕೂರಿನಲ್ಲಿ ಒಂದು ಕ್ರೀಡಾಂಗಣ ನಿರ್ಮಾಣ ಮಾಡುತ್ತಿದ್ದಾರೆ. 41 ಎಕರೆ ಜಮೀನು, 9 ಎಕರೆ ಖರಾಬು ಸೇರಿ ಒಟ್ಟು 50 ಎಕರೆ ಅವರಿಗೆ ಸಿಗುತ್ತಿದೆ. ಇದು ಒಳ್ಳೆ ಪ್ರದೇಶ ಎಂದು ತಿಳಿಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಬೌಲಿಂಗ್ ಮಾಡಿದರು. ಸಿಎಂ ಬಳಿಕ ಗೃಹ ಸಚಿವ ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್ ರಾಜಣ್ಣ, ಶಾಸಕ ಸುರೇಶ್ ಬ್ಯಾಟಿಂಗ್ ಮಾಡಿದರು.