Breaking News

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ:ಸಿದ್ದರಾಮಯ್ಯ

Spread the love

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು.

ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.

ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ.
ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ.

ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದರು.

ಇನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ಸರಕಾರ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಕೈಗೊಂಡ ಕ್ರಮಗಳ ಕುರಿತು ಮಾಹಿತಿಯನ್ನು ನೀಡಿದರು


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ