ದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ ಬಂದಾಗ ಬಿವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವರೆಂದು ವರಿಷ್ಠರಿಗೆ ದೂರು ನೀಡಲಿದ್ದೇವೆ
ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರನ್ನು ಎತ್ತಿಕಟ್ಟುವುದಕ್ಕೋಸ್ಕರ ಅವರನ್ನು ಮೀಟಿಂಗ್ಗೆ ಕರೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ ಹೇಳಿದರು.