Breaking News

ರಾಜ್ಯಪಾಲರಿಗೆ ಕಡತ ರವಾನಿಸಿದ ಸರ್ಕಾರ ಬಿಎಸ್​​ವೈಗೆ ಢವಢವ ಶುರು

Spread the love

ಬೆಂಗಳೂರು,   ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ ಮನವಿ ಮಾಡಿದೆ.

ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ಇಂದು(ಡಿಸೆಂಬರ್ 03) ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ.​​ ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್​​ವೈಗೆ ಢವಢವ ಶುರುವಾಗಿದೆ.

ಬಿಡಿಎ ಹೌಸಿಂಗ್​ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ಅದರಂತೆ ಇಂದು ರಾಜ್ಯಪಲಾರಿಗೆ ಬಿಎಸ್​ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಕಡತ ರವಾನಿಸಿದೆ. ಆದ್ರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದರ ಮೇಲೆ ಬಿಎಸ್​​ವೈ ಭವಿಷ್ಯ ನಿರ್ಧಾರವಾಗಲಿದೆ.


Spread the love

About Laxminews 24x7

Check Also

ಹೃದಯಾಘಾತದಿಂದ ಸಾವನ್ನಪ್ಪಿದ ಡಾ.ಸಂದೀಪ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ

Spread the loveಶಿವಮೊಗ್ಗ/ತುಮಕೂರು: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ