ಬೆಳಗಾವಿಯ ಸುಭಾಷ್ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು.
ಬುಧವಾರದಂದು ಬೆಳಗಾವಿಯ ಸುಭಾಷ ನಗರದಲ್ಲಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನ ನೀಡಿದರು.
ಲೋಕೋಪಯೋಗಿ ಇಲಾಖೆಯ 25 ಲಕ್ಷ ರೂಪಾಯಿ ಅನುದಾನದಲ್ಲಿ ಈ ಕಾಮಗಾರಿಯನ್ನ ಕೈಗೊಳ್ಳಲಾಗಿದೆ.
ಈ ಕುರಿತು ಇನ್ ನ್ಯೂಜಗೆ ಮಾಹಿತಿಯನ್ನು ನೀಡಿದ ಶಾಸಕರು, ಲೋಕೋಪಯೋಗಿ ಇಲಾಖೆ, ಅಲ್ಪಸಂಖ್ಯಾತರ ಅನುದಾನ, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಕಾಮಗಾರಿಕರಣ ಆರಂಭಿಸಲಾಗಿದೆ. ಶೀಘ್ರದಲ್ಲಿ ಇಲ್ಲಿನ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.
ಈ ವೇಳೆ ನಗರ ಸೇವಕ ಶಾಹಿದ್ ಪಠಾಣ,ಹಿರಿಯರು ಹಾಗೂ ಸ್ಥಳೀಯರು ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ದರು.