Breaking News

CM&DCM ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶ

Spread the love

ಹಾಸನದ ಎಸ್.ಎಂ.ಕೃಷ್ಣ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆ.

ಕೊರೋನಾ, ಬೆಲೆ ಏರಿಕೆ, ನಿರುದ್ಯೋಗದಿಂದ ರಾಜ್ಯದ ಜನರು ಸಾಕಷ್ಟು ತತ್ತರಿಸಿದ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ನಾಯಕರು,

ಕಾರ್ಯಕರ್ತರು ರಾಜ್ಯದಲ್ಲಿ ಸಂಚರಿಸಿ ಜನರ ನೋವು ಅರಿತು 5 ಗ್ಯಾರಂಟಿಗಳನ್ನು ನೀಡಿ, ಯಶಸ್ವಿಯಾಗಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 100 ದಿನಗಳಲ್ಲಿ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿದ್ದೇವೆ

ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೆವಾಲಾ, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು,

ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಮುಖಂಡರು, ಅಪಾರ ಕಾರ್ಯಕರ್ತರು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

Spread the love ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ