ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 1 ತೀರ್ಪು ನೀಡಿದೆ.
ನೇಸರಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಿಸಲಾಗಿದೆ. ಪಿರ್ಯಾದಿಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.ಆರೋಪಿತನು ಕೊನೆ ಉಸಿರು ಇರುವವರೆಗೂ ಕಠಿಣ ಕಾರಾಗೃಹ ತೀಕ್ಷೆ & 30,000 ರೂಪಾಯಿ ದಂಡ ವಿಧಿಸಿ ಪ್ರಕರಣದ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ಧನವನ್ನು ಪಡೆಯಲು ನ್ಯಾಯಾಲಯ ಆದೇಶಿಸಿದೆ. ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.