Breaking News

ನನಗೆ ಸಚಿವ ಸ್ಥಾನ ಕೊಡಲೇಬೇಕು:ಎಸ್​ಎನ್ ಸುಬ್ಬಾರೆಡ್ಡಿ

Spread the love

ಡಿಸೆಂಬರ್ 6: ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್​ಎನ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ. ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೆ ಸಚಿವ ಸ್ಥಾನ ಬೇಕು. ಅಪರೇಷನ್ ಕಮಲದಲ್ಲಿ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್ ಕೊಟ್ಟಿದ್ದರು. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಟೆಯಿಂದ ಇದ್ದೆ. ಮುಂದೆ ಸಚಿವ ಸಂಪುಟ ಪುನರಚನೆ ವೇಳೆ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ.

ನಾನು ಹಿರಿಯ ಶಾಸಕ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನನಗೆ ಸಂಪುಟದಲ್ಲಿ ಸ್ಥಾನ ಕೊಡುವ ಭರವಸೆ ಇದೆ. ನಾನು ಎರಡು ಬಾರಿ ನಿಗಮ ಮಂಡಳಿ ತಿರಸ್ಕಾರ ಮಾಡಿದ್ದೇನೆ. ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಗೌರಿಬಿದನೂರು, ಚಿಂತಾಮಣಿ ಕ್ಷೇತ್ರದ ಎಲ್ಲರೂ ಸಚಿವರಾಗಿದ್ದಾರೆ. ಬಾಗೇಪಲ್ಲಿ ಯಿಂದ ಇದುವರೆಗೂ ಯಾರೂ ಕೂಡ ಸಚಿವರಾಗಿಲ್ಲ. ಹಾಗಾಗಿ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಬೇಡಿಕೆ ಇಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡದ ಹೈಕಮಾಂಡ್

ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದರು. ಆದರೆ ಸದ್ಯಕ್ಕೆ ಸಂಪುಟ ಪುನಾರಚನೆ ಬೇಡವೆಂದು ಹೈಕಮಾಂಡ್ ನಾಯಕರು ತಿಳಿಸಿದ್ದರು. ಅದಾಗಿಯೂ ರಾಜ್ಯದಲ್ಲಿ ಕೆಲವು ಮಂದಿ ಕಾಂಗ್ರೆಸ್ ನಾಯಕರು ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

Spread the love2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ