Breaking News

ಡಾಕ್ಟರ್​​ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ

Spread the love

ಕಲಬುರಗಿ, (ಡಿಸೆಂಬರ್ 06): ಎಂಬಿಬಿಎಸ್​ ವೈದ್ಯೆಯಾಗಬೇಕೆಂಬ ಕನಸು ನನಸಾಗದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ನಡೆದಿದೆ. ಕಲಬುರಗಿ ಮೂಲದ ತನುಜಾ ಎನ್ನುವ ವಿದ್ಯಾರ್ಥಿನಿ, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ, ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಎರಡೂ ಬಾರಿಯೂ ಸಹ ಎಂಬಿಬಿಎಸ್​ ಸೀಟು ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ತನುಜಾ, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಅನಂತಪುರ ಜಿಲ್ಲೆಯ ರಾಯದುರ್ಗದ ಬಳಿ ರೈಲಿನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ.

ರಾಯದುರ್ಗದ ಉಪನಗರದ ರೈಲ್ವೆ ಹಳಿಯಲ್ಲಿ ಯುವತಿಯ ಶವವನ್ನು ರೈಲ್ವೆ ಪೊಲೀಸರು ಪತ್ತೆ ಮಾಡಿದ್ದು, ಕೂಡಲೇ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಆರಂಭದಲ್ಲಿ ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಆದ್ರೆ, ಸಾಯುವ ಮುನ್ನ ತನುಜಾ ತನ್ನ ಪೋಷಕರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿರುವುದು ಗೊತ್ತಾಗಿದೆ. ಆಗ ಪೊಲೀಸರಿಗೆ ಇದೊಂದು ಆಕಸ್ಮಕ ಸಾವು ಅಲ್ಲ, ಆತ್ಮಹತ್ಯೆ ಎನ್ನುವುದು ಖಚಿತವಾಗಿದೆ.


Spread the love

About Laxminews 24x7

Check Also

ಎಲ್ಲಾ ಶಾಸಕರು ಪಂಚಮಸಾಲಿ ‌ಮೀಸಲಾತಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಇಲ್ಲವಾದ್ರೆ ಜನರಿಂದ ನೀವು ದೂರವಾಗು ಕಾಲ ಬರಲಿದೆ.

Spread the love2A ಮೀಸಲಾಗಿಗೆ ಆಗ್ರಹಿಸಿ ಪಂಚಮಸಾಲಿ ‌ಶ್ರೀ‌ಹೋರಾಟಕ್ಕೆ ಕರೆ. ಡಿಸೆಂಬರ್ ‌10ರಂದು ಬೆಳಗಾವಿ ನಗರಕ್ಕೆ ಟ್ರ್ಯಾಕ್ಟರ್, ಕ್ರೂಸರ್ ನಿಷೇಧ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ