Breaking News

ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು

Spread the love

ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ.ಅವರೆಲ್ಲಾ ವಿಮಾನದ ಸದ್ದು ಬಂದರೆ ಶಾಲೆಯಿಂದ ಹೊರಬಂದು ಆಕಾಶದಲ್ಲಿ ಹೋಗುತ್ತಿದ್ದ ವಿಮಾನವನ್ನು ಬೆರಗುಕಣ್ಣಿನಿಂದ ನೋಡ್ತಿದ್ದರು. ತಾವು ಕೂಡ ಒಮ್ಮೆಯಾದರೂ ವಿಮಾನದಲ್ಲಿ ಹಾರಾಡಬೇಕು ಅನ್ನೋ ಆಸೆಯಿದ್ದರು ಕೂಡ ಆರ್ಥಿಕ ಸಂಕಷ್ಟ ಮಕ್ಕಳ ಆಸೆಗೆ ಅಡ್ಡಿಯಾಗಿತ್ತು. ಆದರೆ ಮಕ್ಕಳ ಆಸೆಯನ್ನು ಶಿಕ್ಷಕರು, ಗ್ರಾಮಸ್ಥರು ಈಡೇರಿಸಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ಆ ಮೂಲಕ ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೊದಲು ಎನ್ನುವುದು ಹೆಮ್ಮೆಯ ವಿಷಯವಾಗಿದೆ.

Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ