ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆ ಎಎಸ್ಐ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸ್ವಗ್ರಾಮ ಅನಂತಪೂರದ ತನ್ನ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.
ಇನ್ನು, ಸೂಸೈಡ್ ಮಾಡಿಕೊಂಡ ಎಎಸ್ಐ (50) ಶಂಭು ಮೆತ್ರಿ. ಇವರು ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿವರ್ಹಿಸುತ್ತಿದ್ದರು.
ಕಳೆದ ಹಲವು ತಿಂಗಳಿಂದ ಶಂಭು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಜೀವನದ ಮೇಲೆ ಜಿಗುಪ್ಸೆ ಬಂದು ಪ್ರಾಣಬಿಟ್ಟಿದ್ದಾರೆ ಎನ್ನುತ್ತಿವೆ ಪೊಲೀಸ್ ಮೂಲಗಳು. ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.