Breaking News

ವಿಧಾನ ಪರಿಷತ್ ಸಭಾಪತಿ‌ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ…

Spread the love

ಬೆಳಗಾವಿ ಡಿ.7 : ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ (ಡಿ.7) ಜರುಗಿದ‌ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಬೆಳಗಾವಿ ಅಧಿವೇಶನ ಯಶಸ್ವಿಗೆ ಹಾಗೂ ಪರಿಷತ್ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ವಿಧಾನ ಪರಿಷತ್ ಸದಸ್ಯರಿಗೆ ಈಗಾಗಲೇ ಅನೇಕ ಸಲಹೆಗಳನ್ನು ನೀಡಲಾಗಿದೆ. ಈ ಬಾರಿ ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿರುತ್ತವೆ ಎಂದರು.

ಮೊದಲ ವಾರ ಮಂಗಳವಾರ ಹಾಗೂ ಬುಧವಾರಗಳಂದು ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ‌ ಚರ್ಚೆಗಳಿಗೆ ಒತ್ತು‌ ನೀಡಲಾಗುವದು.

ಅಧಿವೇಶನದ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ‌ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ ಎಂದರು.

ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮ‌ವಹಿಸಲಾಗುತ್ತಿದ್ದು, ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರಕಾರಕ್ಕೆ ಸಲಹೆ ನೀಡಲು ಕ್ರಮ ವಹಿಸಲಾಗುವದು.

ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೇ ಚರ್ಚಿಸಲಾಗಿದ್ದು, ಸದನ ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ.

ಶಾಸಕರ ಹಾಜರಾತಿ ಹೆಚ್ಚಳಕ್ಕೆ ಕೂಡ ಆದ್ಯತೆ ನೀಡಲಾಗುವುದು.ಬೆಳಗಾವಿ ಸುವರ್ಣ ವಿಧಾನಸೌಧ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ಅಧಿವೇಶನ ನಡೆಸಲು ಈ ಬಾರಿ 20 ಕೋಟಿ ಅಂದಾಜಿಸಲಾಗಿದೆ. ಶಾಸಕರ ಭವನ ನಿರ್ಮಿಸಲು ಕೆಲವು ಪ್ರಸ್ತಾವನೆಗಳು ಬಂದಿವೆ. ಇವುಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ‌‌ ಕೈಗೊಳ್ಳಲಾಗುವದು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ