Breaking News

ಕೋವಿಡ್​ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್

Spread the love

ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಕೋವಿಡ್​ ಅಕ್ರಮಗಳಲ್ಲಿ ಹಣ ತಿಂದವರನ್ನ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕೋವಿಡ್ ಅಕ್ರಮದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತು ವಿಧಾನಸೌಧದಲ್ಲಿ ಉಪಸಮಿತಿಯು ಶನಿವಾರ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.

ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ. ಜಾನ್ ಮೈಕಲ್ ಡಿ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದೇವೆ. ಈ ವರದಿಯ ಪರಿಶೀಲನೆಯನ್ನು ಮಾತ್ರ ನಾವು ಮಾಡುತ್ತಿದ್ದೇವೆ. ಉಳಿದಂತೆ ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಮತ್ತೊಂದು ಕಡೆ ಇಲಾಖೆಯಲ್ಲಿ ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ ಎಂದರು.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ನಡೆದಿಲ್ಲ ಎಂದು ವರದಿ ನೀಡಿದ್ದನ್ನು ನಮ್ಮ ಸರ್ಕಾರ ಒಪ್ಪುವುದಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಮತ್ತೆ ತನಿಖೆಯಾಗಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರೇ ಆ ಆಸ್ಪತ್ರೆಗೆ ಹೋಗಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿದ್ದೆವು. 36 ಜನ ಸತ್ತರೆ, ಆಗಿನ ಸಚಿವರು ಕೇವಲ ಮೂರು ಮಂದಿ ಸತ್ತಿದ್ದರು ಎಂದು ಹೇಳಿದ್ದರು. ನಾನು ಮೃತಪಟ್ಟ 36 ಮಂದಿಯ ಮನೆಗಳಿಗೆ ಭೇಟಿ ನೀಡಿದ್ದೇನೆ. ಈ ವಿಚಾರವಾಗಿ ಬೆಳಗಾವಿಯಲ್ಲಿ ಸಭೆ ಮಾಡಿ ಈ ವಿಚಾರಣೆ ಪ್ರಕ್ರಿಯೆ ಪರಿಶೀಲಿಸುತ್ತೇವೆ. ಈ ಸಮಿತಿಯು ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ