ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸಪ್ರೆಸ್ ರೈಲನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ನಿಲುಗಡೆ ಕಲ್ಪಿಸುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಉಪಸ್ಥಿತರಿದ್ದರು.