ಬೆಂಗಳೂರು: ನಿಜವಾದ ಹೇಡಿಗಳು ಯಾರು ? ರೈತರೋ ?ಅಥವಾ ರಾತ್ರೋ ರಾತ್ರಿ ಮುಂಬೈಗೆ ಹಾರಿದವರೋ ? ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರಕಾರವೋ? ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಅವರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನಿಜವಾದ ಹೇಡಿಗಳು ಯಾರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ ಕೇಳಿದ್ದಕ್ಕೆ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ? ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕೃಷಿ ಸಚಿವರು ಪೆÇನ್ನಂಪೇಟೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ರೈತರು ಹಾಗು ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Laxmi News 24×7