Breaking News

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

Spread the love

ಬಳ್ಳಾರಿ, ಡಿಸೆಂಬರ್​ 08: ಬಳ್ಳಾರಿ ಜಿಲ್ಲಾಸ್ಪತ್ರೆ (BIMS)ಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಘೋಷಣೆ ಮಾಡಿದ್ದಾರೆ.

ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಆಗಿದೆ. ಜೊತೆಗೆ 3 ಲಕ್ಷ ರೂ. ಕೊಡುತ್ತೇವೆ ಎಂದು ತಿಳಿಸಿದರು.ಬಳ್ಳಾರಿ ಬಿಮ್ಸ್​ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು ದುರದೃಷ್ಟ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Spread the loveಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು  ಮೈಸೂರಿನಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ